Heavy rains : ರಾಜ್ಯದಲ್ಲಿ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.
ಹೌದು, ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಳಗಾವಿ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಆಗಸ್ಟ್ 24ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ.
ಶೃಂಗೇರಿಯಲ್ಲಿ ಧಾರಾಕಾರ ಮಳೆ; ಹಲವು ಪ್ರದೇಶಗಳು ಜಲಾವೃತ
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಇದೀಗ ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಶೃಂಗೇರಿ ಪಟ್ಟಣ ಅಕ್ಷರಶ ಜಲಾವೃತಗೊಂಡಿದೆ.
ಭಾರೀ ಮಳೆಯಿಂದಾಗಿ ಪಟ್ಟಣದ ಬಹುತೇಕ ಪ್ರದೇಶಗಳು ಮುಳುಗಡೆಯಾಗಿರುವ ಬಗ್ಗೆ ವರದಿಯಾಗಿದ್ದು, ತುಂಗಾ ನದಿಯ ಅಬ್ಬರಕ್ಕೆ ಗಾಂಧಿ ಮೈದಾನ ಪಾರ್ಕಿಂಗ್ ಲಾಟ್ ಸಂಪೂರ್ಣ ಜಲಾವೃತವಾಗಿದೆ. ತುಂಗೆಯ ಹರಿವಿನ ತೀವ್ರತೆಗೆ ನದಿಯ ಇಕ್ಕೆಲದಲ್ಲಿದ್ದ ತೋಟಗಳು ನೀರಿನಲ್ಲಿ ಮುಳುಗೊಡೆಗೊಂಡಿವೆ.




