Heavy rain : ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಕರಾವಳಿ ಮತ್ತು ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಈ ರಾಶಿಯವರಿಗೆ ಭಾರೀ ಅದೃಷ್ಟ..!
Heavy rain : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಹೌದು, ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಸೆಪ್ಟೆಂಬರ್ 26ರಂದು ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಸೆಪ್ಟೆಂಬರ್ 25 ಮತ್ತು 26ರಂದು ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ PDO ಹುದ್ದೆಗಳಿಗೆ ಅರ್ಜಿ ಅಹ್ವಾನ
ಇನ್ನು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.