ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವೊಂದು ಕೇರಳದಲ್ಲಿ ಪತ್ತೆಯಾಗಿದ್ದು, ವಿದೇಶದಿಂದ ಬರುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇಂದಿನಿಂದ ವಿದೇಶದಿಂದ ಬರುವವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಸುಮಾರು 60 ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣವು ವ್ಯಾಪಿಸಿದ್ದು, ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರವು ಪ್ರಯಾಣಿಕರಿಗೆ ಸೂಚನೆ ನೀಡಿದೆ.
ಇನ್ನು, ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬಾರದು. ಇಲಿ ಅಳಿಲು ಹಾಗೂ ಮಂಗ ಮತ್ತಿತ್ತರ ಸತ್ತ ಅಥವಾ ಜೀವಂತ ಪ್ರಾಣಿಗಳ ಸಂಪರ್ಕ ಮಾಡಬಾರದು. ಕಾಡು ಪ್ರಾಣಿ ಮಾಂಸ ತಿನ್ನುವುದು ಜೊತೆಗೆ ಅವುಗಳಿಂದ ತಯಾರಿಸಿದ ಉತ್ಪನ್ನಗಳನ್ನು (ಕ್ರೀಮ್, ಲೋಷನ್) ಬಳಸದಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.