ಬೆಂಗಳೂರು: ದೇಶದ ಹೆಸರಂತ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ (87) ಅವರು ಸೋಮವಾರ ರಾತ್ರಿ ವಿಧಿವಶಪ್ರೊ.ರೊದ್ದಂ ನರಸಿಂಹರಾಗಿದ್ದಾರೆ. ಪ್ರೊ.ರೊದ್ದಂ ನರಸಿಂಹ ಅವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.
1933ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಪ್ರೊ.ರೊದ್ದಂ ನರಸಿಂಹ ಅವರು, ಮೈಸೂರು ವಿವಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದರು. ವೈಮಾನಿಕ ವಿಜ್ಞಾನ, ಫ್ಲೂಯಿಡ್ ಡೈನಮಿಕ್ಸ್ ಸಂಶೋಧನೆಗಳನ್ನು ನಡೆಸಿದ್ದ ಅವರಿಗೆ ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳು ಸಹ ಲಭಿಸಿದ್ದವು.
ಪ್ರೊ.ರೊದ್ದಂ ನರಸಿಂಹ ಅವರ ನಿಧನಕ್ಕೆ ಅರೋಗ್ಯ ಸಚಿವ ಕೆ ಸುಧಾಕರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.