ಮಸ್ಕಿ: ‘ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದಾರೆ.
ಮಸ್ಕಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ ಪಿ ರೇಣುಕಾಚಾರ್ಯ ಅವರು, ಯತ್ನಾಳ್ ಅವರಿಗೆ ಈಗಾಗಲೇ ಪಕ್ಷದಿಂದ ನೋಟಿಸ್ ಕೊಟ್ಟಿದ್ದಾರೆ. ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ. ಈ ಬಗ್ಗೆ ಅವರೇ ಕ್ರಮ ಕೈಗೊಳ್ಳುತ್ತಾರೆ. ಇನ್ನು ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್ ಬೆಂಬಲ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಆದರೆ, ಆರ್‌ಎಸ್‌ಎಸ್ ಯಾವಾಗಲೂ ಕತ್ತರಿ ಹಾಕುವ ಕೆಲಸ ಮಾಡುವುದಿಲ್ಲ. ಸೂಜಿ, ದಾರದಂತೆ ಜೋಡಿಸುವ ಕೆಲಸ ಮಾಡುತ್ತದೆ’ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಹೇಳಿದ್ದಾರೆ.