ಹೊನ್ನಾಳಿ: ಕಂದಾಯ ಸಚಿವ ಆರ್.ಅಶೋಕ್ ಅವರು ಅನುಷ್ಠಾನಗೊಳಿಸುತ್ತಿರುವ ‘ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮ ಒಂದು ವಿನೂತನ ಕಾರಗಯಕ್ರಮ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಗ್ರಾಮ ವಾಸ್ತವ್ಯ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಮಕ್ಷೆಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯ’ ಸರಕಾರಿ ಕಾರ್ಯಕ್ರಮ ಆಗಬಾರದು ಜನರ ಕಾರ್ಯಕ್ರಮ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.