ಬೆಂಗಳೂರು: ರಾಜ್ಯದಲ್ಲಿ ‘ಶಾಲೆಗಳನ್ನು ಪುನಾರಂಭ ಮಾಡುವ ವಿಷಯದಲ್ಲಿ ದುಡುಕುವುದು ಬೇಡ’ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಸಿ ಎನ್ ಮಂಜುನಾಥ್ ಅವರು ಎಚ್ಚರಿಸಿದ್ದಾರೆ.
ಹೌದು, ‘ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿವೆ. ಈ ವೇಳೆ ರಾಜ್ಯದಲ್ಲಿ ಶಾಲೆ ಆರಂಭಿಸಲು ಇನ್ನೆರಡು ವಾರಗಳ ಕಾಲ ಕಾದು ನೋಡುವುದು ಒಳಿತು’ ಎಂದು ಡಾ.ಸಿ ಎನ್ ಮಂಜುನಾಥ್ ಅವರು ಸಲಹೆ ನೀಡಿದ್ದಾರೆ. ‘ಮಕ್ಕಳಿಗೆ ಇನ್ನೂ ಲಸಿಕೆ ಲಭ್ಯವಾಗಿಲ್ಲ. ಹೀಗಾಗಿ, ಶಾಲೆ ಆರಂಭಿಸುವ ಬಗ್ಗೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕಿದೆ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



