ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಮತ್ತು ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ಶಿಕ್ಷಕರು-ವಿದ್ಯಾರ್ಥಿಗಳಿಗೆ ನೀಡುತ್ತಿರುವ ವೈದ್ಯಕೀಯ ಧನ ಸಹಾಯವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಹೌದು, ಕ್ಷಕರು-ವಿದ್ಯಾರ್ಥಿಗಳಿಗೆ ನೀಡುತ್ತಿರುವ ವೈದ್ಯಕೀಯ ಧನ ಸಹಾಯವನ್ನು ಪರಿಷ್ಕರಣೆ ಮಾಡಲಾಗಿದ್ದು, ವರ್ಗವಾರು ಮೊತ್ತವನ್ನು 10000-20000ರೂ., 30000-50000ರೂ., 50000-75000ರೂ., 1ಲಕ್ಷದಿಂದ 2.5ಲಕ್ಷಕ್ಕೆ ಏರಿಸಲಾಗಿದೆ. ಹೊಸ ದರ ಏಪ್ರಿಲ್ 1ರ ನಂತರ ಚಿಕಿತ್ಸೆ ಪಡೆಯುವ ಶಿಕ್ಷಕರು/ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.