ಈ ವಾರದಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಳಿಕೆ ಕಾಣುತ್ತಿದ್ದು, ಕರ್ನಾಟಕದಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 176 ರೂ ಏರಿಕೆಯೊಂದಿಗೆ 54,050 ರೂ ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 200 ರೂ ಹೆಚ್ಚಳವಾಗಿದ್ದು ರೂ.49,550 ಆಗಿದೆ. ಅದೇರೀತಿ 70 ಸಾವಿರದ ಗಡಿ ದಾಟಿದ್ದ ಬೆಳ್ಳಿ ಬೆಲೆಯಲ್ಲಿ ರೂ. 200 ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ. 71,000ಕ್ಕೆ ಏರಿದೆ.
ಇನ್ನು, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಹೀಗಿದ್ದು, ಚೆನ್ನೈ-50,160, ಮುಂಬೈ-49,500, ದೆಹಲಿ-49,650, ಹೈದರಾಬಾದ್-49,500 ರೂ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.