ಹುಬ್ಬಳ್ಳಿಯ ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಟರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು.
ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.