ಪಡಿಕ್ಕಲ್, ವಿರಾಟ್ ಅಬ್ಬರ, ಚಾಹಲ್ ಮ್ಯಾಜಿಕ್ ; ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿಕೆಟ್ ಗಳ ಭರ್ಜರಿ ಗೆಲವು ದಾಖಲಿಸಿದೆ.…

rcb-vijayaprabha

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿಕೆಟ್ ಗಳ ಭರ್ಜರಿ ಗೆಲವು ದಾಖಲಿಸಿದೆ.

ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 158 ರನ್ ಗಳಸಿ ಭರ್ಜರಿ ಗೆಲುವು ದಾಖಲಿಸಿತು. ಆರ್ ಸಿಬಿ ಪರ, ಅರೋನ್ ಫಿಂಚ್-8, ದೇವದತ್ ಪಡಿಕ್ಕಲ್-63 & ನಾಯಕ ವಿರಾಟ್ ಕೊಹ್ಲಿ -72 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ರಾಜಸ್ತಾನ್ ರಾಯಲ್ಸ್ ಪರ, ಶ್ರೇಯಸ್ ಗೋಪಾಲ್, ಜೊಫ್ರಾ ಆರ್ಚರ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ರಾಜಸ್ತಾನ್ ರಾಯಲ್ಸ್ ತಂಡ ಆರಂಭಿಕ ಆಟಗಾರ ಜೋಸ್ ಬಟ್ಲರ್-22, ಲೆಮಾರರ್-47, ರಾಹುಲ್ ತೆವಟಿಯ -24, ಅವರ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಯಜುವೇಂದ್ರ ಚಾಹಲ್-3, ಇಸುರು ಉಡಾನ 2, ನವದೀಪ್ ಸೈನಿ 1 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.