ಇಂದು ಕನ್ನಡಿಗರೇ ತುಂಬಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಾಟ

ದುಬೈ : ಇಂದು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸನ್‌ರೈಸರ್ಸ್ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದ ಉತ್ಸಾಹದಲ್ಲಿರುವ ಕೊಹ್ಲಿ ಪಡೆ ಅಖಾಡಕ್ಕೆ…

RCB VS KXIP

ದುಬೈ : ಇಂದು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸನ್‌ರೈಸರ್ಸ್ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದ ಉತ್ಸಾಹದಲ್ಲಿರುವ ಕೊಹ್ಲಿ ಪಡೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದು, ದೆಹಲಿ ವಿರುದ್ಧದ ಪಂದ್ಯದಲ್ಲಿ ‘ಸೂಪರ್ ಓವರ್’ ನಲ್ಲಿ ಸೋಲನುಭವಿಸಿದ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡ ಇಂದು ಗೆಲ್ಲುವ ನಿರೀಕ್ಷೆಯಲ್ಲಿ ಕಣಕ್ಕಿಳಿಯಲಿದೆ.

ಮೊದಲ ಪಂದ್ಯದಲ್ಲಿ ಮಿಂಚಿದ್ದ ರಣಜಿ ಪ್ರತಿಭೆ ದೇವದತ್ ಪಡಿಕ್ಕಲ್ ಜೊತೆ ಅರೋನ್ ಫಿಂಚ್ ಇನ್ನಿಂಗ್ಸ್ ಆರಂಭಿಸಲಿದ್ದು, ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ಶಿವಂ ದುಬೆ ಯಂತಹ ಆಟಗಾರರು ಆರ್ ಸಿಬಿ ತಂಡದಲ್ಲಿದ್ದಾರೆ. ಮತ್ತೊಂದೆಡೆ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ನಾಯಕ ಕೆ ಎಲ್ ರಾಹುಲ್, ಮಾಯಾಂಕ್ ಅಗರ್ವಾಲ್, ಮ್ಯಾಕ್ಸ್ ವೆಲ್ ಅವರ ರೂಪದಲ್ಲಿ ಉತ್ತಮ ಹಿಟ್ಟರ್ಗಳನ್ನು ಹೊಂದಿದೆ.

ದೆಹಲಿ ವಿರುದ್ಧದ ಪಂದ್ಯದಲ್ಲಿ, ಮಾಯಾಂಕ್ ಅಗರವಾಲ್ ಅದ್ಬುತ ಪ್ರದರ್ಶನ ನೀಡಿದ್ದರು. ಮೊದಲ ಪಂದ್ಯದಲ್ಲಿ ಪಂಜಾಬ್ ತಂಡದ ಅಂತಿಮ ೧೧ ರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಕ್ರಿಸ್ ಗೇಲ್ ಇಂದು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

Vijayaprabha Mobile App free

ಬೌಲಿಂಗ್ ವಿಭಾಗದಲ್ಲಿ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡ ಮೊಹಮ್ಮದ್ ಶಮಿ, ಕಾಟ್ರೆಲ್ ಮತ್ತು ರವಿ ಬಿಷ್ಣೋಯಿ, ಮುಜೀಬ್ ಉರ್ ರೆಹಮಾನ್ ಅವರಂತಹ ಆಟಗಾರರನ್ನು ಹೊಂದಿದೆ.. ದೆಹಲಿ ವಿರುದ್ಧದ ಪಂದ್ಯದಲ್ಲಿ ಮಹಮ್ಮದ್ ಶಮಿ 4 ಓವರ್‌ಗಳಲ್ಲಿ ಕೇವಲ 15 ರನ್‌ಗಳನ್ನು ಬಿಟ್ಟುಕೊಟ್ಟು 3 ವಿಕೆಟ್‌ಗಳನ್ನು ಪಡೆಡಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಬೌಲರ್‌ಗಳ ಸಹಾಯದಿಂದ ಪಂದ್ಯವನ್ನು ಗೆದ್ದಿದ್ದು, ಈ ಪಂದ್ಯದಲ್ಲಿ ನವದೀಪ್ ಶೈನಿ ಮತ್ತು ಶಿವಂ ದುಬೆ ಮತ್ತು ಯುಜ್ವೇಂದ್ರ ಚಾಹಲ್ ಅವರು ಉತ್ತಮ ಬೌಲಿಂಗ್ ಮಾಡಿದ್ದರು. ಡೇಲ್ ಸ್ಟೇನ್ ಮತ್ತು ಉಮೇಶ್ ಯಾದವ್ ಅವರಂತಹ ಆಟಗಾರರು ಆರ್‌ಸಿಬಿ ತಂದಲ್ಲಿದ್ದಾರೆ.

ಐಪಿಎಲ್‌ನಲ್ಲಿ ಈವರೆಗೆ ಉಭಯ ತಂಡಗಳು 24 ಬಾರಿ ಎದುರಾಗಿದ್ದು, ತಲಾ 12 ಪಂದ್ಯಗಳನ್ನು ಗೆದ್ದಿದ್ದಾರೆ. ಇಂದು ನಡೆಯಲಿರುವ ಪಂದ್ಯದಲ್ಲಿ, ಮೊದಲ ಪಂದ್ಯದಲ್ಲಿ ಆಡಿದ ತಂಡದೊಂದಿಗೆ ಆರ್‌ಸಿಬಿ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದ್ದು, ಕಿಂಗ್ಸ್ ಇಲೆವೆನ್ ತಂಡ ನಿಕೊಲಸ್ ಪೂರಾನ್ ಬದಲಿಗೆಕ್ರಿಸ್ ಗೇಲ್ ಅವರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.