ಬೆಂಗಳೂರು : ನವಂಬರ್ 3 ರಂದು ಆರ್ ಆರ್ ನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ
ಆರ್ ಆರ್ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟಾರ್ ವರ್ಗಾವಣೆ ಮಾಡಲಾಗಿದೆ.
ಆರ್ ಆರ್ ನಗರ ಇನ್ಸ್ಪೆಕ್ಟಾರ್ ನವೀನ್ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಿ ಆರ್ ಆರ್ ನಗರಕ್ಕೆ ಮಲ್ಲೇಶ್ವರಂ ಸಂಚಾರಿ ಠಾಣೆ ಇನ್ಸ್ಪೆಕ್ಟಾರ್ ಆಗಿದ್ದ ಆರ್ ಪಿ ಅನಿಲ್ ಅವರನ್ನು ನಿಯೋಜನೆ ಮಾಡಲಾಗಿದೆ.
ಇನ್ಸ್ಪೆಕ್ಟಾರ್ ನವೀನ್ ಅವರು ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ವಿರುದ್ಧ ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿದ್ದರು. ಇದರ ವಿರುದ್ಧ ಕಾಂಗ್ರೆಸ್ ನಾಯಕರು ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ್ದರು. ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಇನ್ಸ್ಪೆಕ್ಟಾರ್ ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ.