ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣೆ ಆಯೋಗದಿಂದ ಘೋಷಣೆ ಮಾಡುವುದೊಂದೇ ಬಾಕಿ ಇದೆ.
ಆರ್ ಆರ್ ನಗರ ಉಪಚುನಾವಣೆಯಲ್ಲಿ ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 1,25,665 ಮತಗಳನ್ನು ಪಡೆದುಕೊಂಡಿದ್ದು,ಈ ಮೂಲಕ 57,672 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರು 67,993 ಮತಗಳು ಪಡೆದರೆ, ಜೆಡಿಎಸ್ ಅಭ್ಯರ್ಥಿ ಕೇವಲ 9,502 ಮತಗಳನ್ನು ಪಡೆದುಕೊಂಡಿದ್ದಾರೆ.