ರೈತರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದ್ದು, ಸದ್ಯ ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯಿತಿ ದರದಲ್ಲಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಹೌದು, ಈ ಬಗ್ಗೆ ಮಾಹಿತಿ ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಸುಮಾರು 25 ಲೀಟರ್ ಡೀಸೆಲ್ ಖರ್ಚು ಮಾಡುತ್ತಾರೆ.
ಹಾಗಾಗಿ ರೈತರಿಗೆ ಪ್ರತಿ ಎಕರೆಗೆ ₹250ರಂತೆ ಗರಿಷ್ಠ 5 ಎಕರೆಗಳಿಗೆ ₹1250 ಡೀಸೆಲ್ ಸಹಾಯಧನ ನೀಡಲಾಗುವುದು. 69 ಲಕ್ಷ ರೈತರು ಈ ಯೋಜನೆಗೆ ಒಳಪಡಲಿದ್ದಾರೆ. ಈ ಯೋಜನೆಗೆ ಸರ್ಕಾರ ಒಪ್ಪಿದ್ದು, ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ.