LPG cylinder : ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದ್ದು, ದೇಶದ ಬಡವರಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆದವರಿಗೆ ಮತ್ತೆ ಸಬ್ಸಿಡಿಯನ್ನು ಈಗ 200 ರೂ.ನಿಂದ 300 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಇದನ್ನೂ ಓದಿ: ಸ್ವಂತ ಮನೆಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ
ಹೌದು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಆಗಸ್ಟ್ ನಲ್ಲಿ 200 ರೂ. ಸಹಾಯಧನ ನೀಡಿರುವುದು ಗೊತ್ತೇ ಇದೆ. ಈಗ ಮತ್ತೆ 100 ರೂ. ಸಬ್ಸಿಡಿ ನೀಡಲಾಗಿದ್ದು, ಇದರೊಂದಿಗೆ ಒಟ್ಟು ಸಹಾಯಧನ 300 ರೂ. ತಲುಪಿದೆ ಎಂದು ಕೇಂದ್ರ ತಿಳಿಸಿದೆ.

LPG cylinder: 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ₹603 ರೂ. ಮಾತ್ರ!!
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಯಿಂದ 300 ರೂ.ಗೆ ಸರ್ಕಾರವು ಸಬ್ಸಿಡಿ ಮೊತ್ತವನ್ನು ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಇದನ್ನೂ ಓದಿ: ಟೈಪ್-2 ಡಯಬಿಟಿಸ್‌ನಿಂದ ಜೀವಿತಾವಧಿ ಕಡಿಮೆ; ಟೈಪ್-2 ಮಧುಮೇಹಕ್ಕೆ ಕಾರಣಗಳೇನು?
ಇದರಿಂದ ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ ₹ 903 ಮಾರುಕಟ್ಟೆ ಬೆಲೆಗೆ ₹ 703 ಪಾವತಿಸುತ್ತಿದ್ದರು. ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಳಿಕ ಈಗ ₹603 ಪಾವತಿಸಲಿದ್ದಾರೆ. ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಂದು ಪಿಎಂ ಮೋದಿ ಪ್ರಾರಂಭಿಸಿದ್ದರು.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |