S M Krishna : ಎಸ್.ಎಂ. ಕೃಷ್ಣ (SM Krishna) ಕರ್ನಾಟಕ ಕಂಡ ಅಪರೂಪದ ವರ್ಣರಂಜಿತ ರಾಜಕಾರಣಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ 1932ರ ಮೇ1ರಂದು ಜನಿಸಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ, ವಿದೇಶಾಂಗ ಸಚಿವರಾಗಿ ದೇಶ ಪ್ರತಿನಿಧಿಸುವ ಮಟ್ಟಕ್ಕೆ ಬೆಳೆದಿದ್ದು ಸ್ಫೂರ್ತಿದಾಯಕ ಕಥೆ.
ಹೌದು, ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ನಂತರ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಇದನ್ನೂ ಓದಿ: SM Krishna passes away | ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ
ಎಸ್.ಎಂ. ಕೃಷ್ಣರ ರಾಜಕೀಯ ಹಾದಿ – S M Krishna political path
ಕರ್ನಾಟಕದ ಹಿರಿಯ ರಾಜಕಾರಣಿ SM ಕೃಷ್ಣ ರಾಜಕೀಯ ಪ್ರವೇಶಿಸಿದ್ದು ಪಕ್ಷೇತರ ಅಭ್ಯರ್ಥಿಯಾಗಿ. 1962ರಲ್ಲಿ ಮದ್ದೂರು ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಚುನಾವಣೆಯಲ್ಲಿಯೇ ಗೆಲುವಿನ ನಗೆ ಬೀರಿದ್ದರು. ನಂತರ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸೇರಿದ್ದರು. 1967ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಸಂಸತ್ ಪ್ರವೇಶಿಸಿದರು. ಬಳಿಕ ಕಾಂಗ್ರೆಸ್ ಸೇರಿ 1971&1980ರ ಚುನಾವಣೆಗಳಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.
ಇದನ್ನೂ ಓದಿ: Ex CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ
ರಾಜ್ಯದ 10ನೇ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ
ಕಾಂಗ್ರೆಸ್ ಪಕ್ಷದಿಂದ ರಾಜ್ಯದ 10ನೇ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.