ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಏನಾಗುತ್ತೋ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು ಎಂದು ಹೇಳುವ…

basanagouda patil yatnal and sadananda gouda vijayaprabha

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಏನಾಗುತ್ತೋ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು ಎಂದು ಹೇಳುವ ಮೂಲಕ, ಮತ್ತೊಮ್ಮೆ ತಮ್ಮ ಸಿಎಂ ಆಗುವ ಆಸೆಯನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಿಚ್ಚಿಟ್ಟಿದ್ದಾರೆ.

ಹೈಕಮಾಂಡ್ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ. ವಿಜಯಪುರ ಜಿಲ್ಲೆಗೆ ಆದ ಅನ್ಯಾಯಕ್ಕೆ ನ್ಯಾಯ ಕೊಡುವ ಕೆಲಸ ಕೇಂದ್ರ ಮಾಡಲಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು?: ಸದಾನಂದ ಗೌಡ

Vijayaprabha Mobile App free

ಇನ್ನು ಸಂಪುಟ ವಿಸ್ತರಣೆ ಆಗುತ್ತೋ, ಮತ್ತೇನಾದರೂ ಆಗುತ್ತೋ ಗೊತ್ತಿಲ್ಲ ಎಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅವರು ಕಿಡಿಕಾರಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಬೇಕು. ಅದನ್ನು ಬಿಟ್ಟು ಬೀದಿಯಲ್ಲಿ ಮಾತನಾಡುವುದು ಅವರ ಭವಿಷ್ಯಕ್ಕೆ ಶೋಭೆ ತರಲ್ಲ. ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಅವರು ಯಾರು, ಪಕ್ಷದ ಅಧ್ಯಕ್ಷರೇ? ಅವರು ಕೇವಲ ಒಬ್ಬ ಸಾಮಾನ್ಯ ಶಾಸಕರಷ್ಟೇ ಎಂದು ಕೇಂದ್ರ ಸಚಿವ ಸದಾನಂದ ಗೌಡ ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.