Safety Island: ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಹೌದು ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಗೃಹ ಸಚಿವ ಜಿ. ಪರಮೇಶ್ವರ್ ಅವರು, ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕೂಡ ಬಳಕೆ ಮಾಡುತ್ತಿದ್ದೇವೆ. ಪೊಲೀಸರ ಪ್ರತಿಕ್ರಿಯೆ ಸಮಯ ಕೂಡ ವೇಗವಾಗಿ ಮಾಡುವ ಪ್ರಯತ್ನ ನಡೆದಿದೆ ಎಂದರು.
ಇದನ್ನು ಓದಿ: ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್.. ರೂ.1 ಲಕ್ಷದವರೆಗೆ ತೆರಿಗೆ ಮನ್ನಾ. ಈಗಲೇ ಪರಿಶೀಲಿಸಿ!
Safety Island:ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ… ಬಳಸುವುದು ಹೇಗೆ?
ಬಳಕೆದಾರರು ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಬಂದು SOS ಬಟನ್ ಒತ್ತಬೇಕು. ಇದು ಸಮೀಪದ ನಿಯಂತ್ರಣ ಕೊಠಡಿಗೆ ಸಂಪರ್ಕ ಕಲ್ಪಿಸಿ, ಕರೆ ಮಾಡಿದ ವ್ಯಕ್ತಿಯ ಪರಿಸ್ಥಿತಿ ಬಗ್ಗೆ ತಿಳಿಸುತ್ತದೆ. ಪೊಲೀಸ್ ಸಿಬ್ಬಂದಿ ಸಾಧ್ಯವಾದಷ್ಟು ಬೇಗ ಸ್ಥಳಕ್ಕೆ ಆಗಮಿಸುತ್ತಾರೆ.
ಇದನ್ನು ಓದಿ: ಸುಕನ್ಯಾ ಸಮೃದ್ಧಿ, ಪಿಪಿಎಫ್ ಖಾತೆದಾರರಿಗೆ ಎಚ್ಚರಿಕೆ; ಮಾರ್ಚ್ 31ರವರೆಗೆ ಅವಕಾಶ..!
ತೊಂದರೆಯಲ್ಲಿರುವ ವ್ಯಕ್ತಿಯು ಮೊಬೈಲ್ ಫೋನ್ ಬಳಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ಪೊಲೀಸರನ್ನು ತಲುಪುವ ರೀತಿಯಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆಯನ್ನು ವಿನ್ಯಾಸಗೊಳಿಸಲಾಗಿದೆ.
Safety Island: ಮಹಿಳೆಯರ ಸುರಕ್ಷತೆಗೆ ಬೆಂಗಳೂರಿನಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ… ಏನಿದರ ವಿಶೇಷತೆ?
ಬೆಂಗಳೂರಿನ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಸ್ಥಾಪಿಸಲಾಗಿದೆ. ನೀಲಿ ಬಣ್ಣದಲ್ಲಿರುವ ಟೆಲಿಫೋನ್ ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್ ಇರಲಿದೆ.
ಇದನ್ನು ಓದಿ: ವಿದ್ಯಾನಿಧಿಗೆ ಅರ್ಜಿ ಸಲ್ಲಿಸಿದರೆ 11,000 ರೂ ನಿಮ್ಮ ಖಾತೆಗೆ; ಸರ್ಕಾರದಿಂದ ಪ್ರೋತ್ಸಾಹಧನ ಪಡೆಯಲು ಹೀಗೆ ಮಾಡಿ
ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್ ಫೋನ್ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಸಬಹುದು. ಪ್ರತಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿ ನೀಡುತ್ತದೆ. ಮಹಿಳೆಯರ ಸುರಕ್ಷತೆ ಇದರ ಮೂಲ ಉದ್ದೇಶ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |