ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಇಂದಿನಿಂದ 7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ನಿನ್ನೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ರಾತ್ರಿಯವರೆಗೆ ನಡೆದಂತ ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ.
ಆದರೆ, ಸರ್ಕಾರಿ ನೌಕರರ ಮುಂದೆ ಸಿಎಂ ಬೊಮ್ಮಾಯಿ ಇಂದು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು, ಹಳೆ ಪಿಂಚಣಿ ಯೋಜನೆ ಮರುಜಾರಿಗೆ ತರಬೇಕು ಎಂಬ ಬೇಡಿಕೆ ಬಗ್ಗೆ ಯಾವುದೇ ಸುಳಿವು ಇಲ್ಲ ಎನ್ನಲಾಗಿದೆ .
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.