Salman Murder Threat: ಸಲ್ಲುಭಾಯ್‌ಗೆ ಕೊಲೆ ಬೆದರಿಕೆ ಹಾಕಿದ್ದ ರಾಜಸ್ತಾನಿ ಅಂದರ್!

ಹಾವೇರಿ: ಬಾಲಿವುಡ್ ಭಾಯಿ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿಯಲ್ಲಿ ಬಂಧನ ಮಾಡಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್‌ ಬಂಧಿತ ಆರೋಪಿಯಾಗಿದ್ದಾನೆ.  ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ…

ಹಾವೇರಿ: ಬಾಲಿವುಡ್ ಭಾಯಿ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿಯಲ್ಲಿ ಬಂಧನ ಮಾಡಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್‌ ಬಂಧಿತ ಆರೋಪಿಯಾಗಿದ್ದಾನೆ. 

ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದು, ಗ್ರಿಲ್ಸ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ‌ ಬಿಕಾರಾಮ್, ಒಂದೂವರೆ ತಿಂಗಳ ಹಿಂದೆ ಕೂಲಿಗಾಗಿ ಹಾವೇರಿಗೆ ಬಂದಿದ್ದಾಗಿ ತಿಳಿದುಬಂದಿದೆ. ಬಿಕಾರಾಮ್‌ಗಾಗಿ ಶೋಧ ನಡೆಸುತ್ತಿದ್ದ ಮುಂಬೈ ಪೊಲೀಸರು ಆತನ ಓಡಾಟದ ಜಾಡು ಹಿಡಿದು ಆತ ಹಾವೇರಿಗೆ ಬಂದಿದ್ದಾಗಿ ಪತ್ತೆಹಚ್ಚಿದ್ದರು‌. ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಮುಂಬೈ ಪೊಲೀಸರ ಮಾಹಿತಿಯ ಆಧಾರದ ಮೇಲೆ ಹಾವೇರಿ ಪೊಲೀಸರು ಬಿಕಾರಾಮ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.