ಮುಂದಿನ ಸಿಎಂ ಘೋಷಣೆ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ- ವಿಜಯೇಂದ್ರ ಭೇಟಿ : ಭಾರಿ ಸಂಚಲನ

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ಸಂಭವಿಸುತ್ತಿದ್ದು,ʻಮುಂದಿನ ಸಿಎಂ ಸತೀಶ್‌ ಜಾರಕಿಹೊಳಿʼ ಘೋಷಣೆ ಬೆನ್ನಲ್ಲೇ, PWD ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ನಿವಾಸ ʻಪವರ್‌ ಸೆಂಟರ್‌ʼ ಆಗಿ ಬದಲಾಗುತ್ತಿದೆ. ಹೌದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ…

Satish Jarakiholi Vijayendra met

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ಸಂಭವಿಸುತ್ತಿದ್ದು,ʻಮುಂದಿನ ಸಿಎಂ ಸತೀಶ್‌ ಜಾರಕಿಹೊಳಿʼ ಘೋಷಣೆ ಬೆನ್ನಲ್ಲೇ, PWD ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ನಿವಾಸ ʻಪವರ್‌ ಸೆಂಟರ್‌ʼ ಆಗಿ ಬದಲಾಗುತ್ತಿದೆ.

ಹೌದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣ (Muda Scam) ಸದ್ದು ಮಾಡುತ್ತಿದ್ದಂತೆ, ಇತ್ತ ಮುಂದಿನ ಸಿಎಂ ನಾನೇ ಎಂದು ಹಲವರು ಹೇಳಿಕೊಳ್ಳುತ್ತಿದ್ದು, ಇದೀಗ ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಎಂದು ಅವರ ಬೆಂಬಲಿಗರು ಘೋಷಣೆ ಹಾಕಿದ್ದಾರೆ. ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರ ಎದುರೇ ಈ ಘೋಷಣೆ ಮಾಡಲಾಗಿದ್ದು, ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದಕ್ಕೆ ಪರ-ವಿರೋಧ ನಿಲುವು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಸಮಸ್ಯೆಗಳ ಮೂಟೆ ಹೊತ್ತ ಗ್ರಾಮಗಳಿಗೆ ‘ಗಾಂಧಿ ಗ್ರಾಮ’ ಗರಿ; ಇದು ಮಹಾತ್ಮಾ ಗಾಂಧಿಗೆ ಮಾಡುತ್ತಿರುವ ಅವಮಾನ: ಬಿ ವೈ ವಿಜಯೇಂದ್ರ

Vijayaprabha Mobile App free

ಸಚಿವ ಜಾರಕಿಹೊಳಿ- ವಿಜಯೇಂದ್ರ ಭೇಟಿ; ಸಂಚಲನ

ಹೌದು, ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಧಿಡೀರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸತೀಶ್ ಅವರನ್ನು ದಿಲ್ಲಿಗೆ ಕಳಿಸಿದ್ದು ಸಿದ್ದರಾಮಯ್ಯನವರು ಎಂದು ವಿಜಯೇಂದ್ರ ಹೇಳಿಕೆ ನೀಡಿದ ಬೆನ್ನಲ್ಲೇ ಈ ಭೇಟಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ಊಹಾಪೋಹ ತಳ್ಳಿ ಹಾಕಿರುವ ವಿಜಯೇಂದ್ರ, ಶಿಕಾರಿಪುರ ಬಳಿ ಆಗುವ ಟೋಲ್ ಶಿಫ್ಟ್ ಮಾಡಲು ಸಚಿವರಿಗೆ ಮನವಿ ಮಾಡಲು ಬಂದಿದ್ದೆ. ಬೇರೇನೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಭೂಮಿ ಮಂಜೂರು!

ಇನ್ನು, ಮಾಜಿ ಸಂಸದ ಡಿಕೆ ಸುರೇಶ್‌ ಸಹ ಇಂದು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು, ಸತೀಶ್‌ ಜಾರಕಿಹೊಳಿ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಎರಡೆರಡು ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಕಾಂಗ್ರೆಸ್‌ನಲ್ಲಿ ಕಿಂಗ್‌ ಮೇಕರ್‌ ಯಾರೂ ಇಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಪರೋಕ್ಷವಾಗಿ ಡಿಕೆಶಿಯನ್ನು ಟೀಕಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.