ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಈ ತಿಂಗಳ ಅಂತ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೂಹೂರ್ತ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದೆ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದ 5800 ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ ಒಂದು ವಾರದಲ್ಲಿ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಚುನಾವಣೆಗೆ ಆಯೋಗ ಹೈಕೋರ್ಟ್ ಆದೇಶದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಕರೋನ ಸೋಂಕು ಹಿನ್ನಲೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ, ಚುನಾವಣೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ಪೊಲೀಸ್ ಸಿಬ್ಬಂದಿ, ಚುನಾವಣಾ ಸಿಬ್ಬಂದಿ ಸಂಚಾರಕ್ಕೆ ಮಿತಿಗೊಳಿಸಿವ ಉದ್ದೇಶದಿಂದ 2ಹಂತಗಳಲ್ಲಿ ಚುನಾವಣೆ ನಡೆಸಿದರೆ ಉತ್ತಮವೆಂದು ಜಿಲ್ಲಾಡಳಿತ ತಿಳಿಸಿದ್ದು, ಇದರಂತೆ 2 ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಒಂದು ಜಿಲ್ಲೆಯಲ್ಲಿ 6 ತಾಲಕು ಗಳಿದ್ದರೆ ಮೊದಲ ಹಂತದ 3 ತಾಲೂಕು ಗಳಲ್ಲಿ ನಂತರ 2 ನೇ ಹಂತದಲ್ಲಿ 3 ತಾಲೂಕುಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.