Schools Holiday | ಶನಿವಾರ ಈ ಜಿಲ್ಲೆಯ ಶಾಲೆಗಳಿಗೆ ರಜೆ; ಯಾವ ಯಾವ ಶಾಲೆಗಳಿಗೆ ರಜೆ?

Schools Holiday : ಶಿವಮೊಗ್ಗದ ವಿವಿಧ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಶನಿವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೌದು, ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ…

schools holiday

Schools Holiday : ಶಿವಮೊಗ್ಗದ ವಿವಿಧ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಶನಿವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹೌದು, ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ನಾನಾ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿಗೆ ನ.23ರಂದು ಚುನಾವಣೆ ನಡೆಯಲಿದೆ. ಬಹುತೇಕ ಶಾಲೆಗಳಲ್ಲಿಯೇ ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಹೀಗಾಗಿ ಶನಿವಾರ ಆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಎಚ್ಚೆತ್ತ ಸರ್ಕಾರ, BPL Card​​ ರದ್ದು ಮಾಡದಂತೆ ಸಿಎಂ ಆದೇಶ; ನಿಮ್ಮ ಕಾರ್ಡ್ ಸ್ಟೇಟಸ್‌ ತಿಳಿಯಲು ಇಲ್ಲಿದೆ ಡೈರೆಕ್ಟ್‌ ಲಿಂಕ್‌!

Vijayaprabha Mobile App free

ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಲಿದ್ದು,ಇದರಿಂದ ಜನದಟ್ಟಣೆ ಉಂಟಾಗಲಿದ್ದು, ಇದು ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಶನಿವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Schools Holiday : ಯಾವ ಯಾವ ಶಾಲೆಗಳಿಗೆ ರಜೆ?

ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸ.ಕಿ.ಪ್ರಾ.ಶಾಲೆ, ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ, ಭದ್ರಾವತಿ ತಾ. ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ), ತೀರ್ಥಹಳ್ಳಿ ತಾ. ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ, ಶಿಕಾರಿಪುರ ತಾ. ತರಲಘಟ್ಟ ಸ.ಹಿ.ಪ್ರಾ.ಶಾಲೆ, ಶಿಕಾರಿಪುರದ ಸ. ಉರ್ದು ಹಿ.ಪ್ರಾ. ಶಾಲೆ, ಶಿರಾಳಕೊಪ್ಪದ ಸ.ಉರ್ದು ಹಿ.ಪ್ರಾ.ಶಾಲೆ, ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆಗೆ ನ.23 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅನರ್ಹರ BPL card ಮಾತ್ರ ರದ್ದು; ಅರ್ಹರಿಗೆ ರೇಷನ್ ಕಾರ್ಡ್ ರದ್ದು ಮಾಡೋಲ್ಲ: ಸಿಎಂ ಸಿದ್ದರಾಮಯ್ಯ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.