ಸ್ಯಾಂಡಲ್ ವುಡ್ ಡ್ರಗ್ಸ್ : ಬಾಲಿವುಡ್ ನಟನ ನಿವಾಸದಲ್ಲಿ ಬೆಂಗಳೂರು ಪೊಲೀಸರಿಂದ ಶೋಧ!

ಮುಂಬೈ: ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮುಂಬೈ ನಿವಾಸದಲ್ಲಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ…

Vivek Oberoi vijayaprabha

ಮುಂಬೈ: ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮುಂಬೈ ನಿವಾಸದಲ್ಲಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ ಅವರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಯ ಸಹೋದರನಾಗಿದ್ದು ನಟ ವಿವೇಕ್ ಒಬೆರಾಯ್ ಮನೆಯಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಬೆಂಗಳೂರು ಪೊಲೀಸರು ಮುಂಬೈನ ವಿವೇಕ್ ಒಬೆರಾಯ್ ಅವರ ಮನೆಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಅವರು ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಮುಖ ಆರೋಪಿಯಾಗಿದ್ದು ಗಾಯಕರು, ನಟ ನಟಿಯರಿಗೆ ಡ್ರಗ್ಸ್ ಸಪ್ಲೆ ಮಾಡುತ್ತಿದ್ದ ಎಂದು ತಿಳಿದಿದ್ದು ಪೊಲೀಸರು ಕ್ರಮ ಕೈಗೊಂಡ ಹಿನ್ನಲೆ ಆದಿತ್ಯ ಆಳ್ವ ಪರಾರಿಯಾಗಿದ್ದ. ಪರಾರಿಯಾಗಿರುವ ಆದಿತ್ಯ ಆಳ್ವ ಬೆಂಗಳೂರು ನಿವಾಸದಲ್ಲಿ ಪೊಲೀಸರು ಕಳೆದ ತಿಂಗಳು ಪರಿಶೀಲನೆ ನಡೆಸಿದ್ದರು.

Vijayaprabha Mobile App free

ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿಯರಾದ ರಾಗಿಣಿ ದ್ವಿವೇದಿ , ಸಂಜನಾ ಗಲ್ರಾಣಿ ಸೇರಿ ಹಲವು ವ್ಯಕ್ತಿಗಳು ಬಂಧನಕ್ಕೊಳಾಗಿದ್ದು, ಈಗ ಪರಾರಿಯಾಗಿರುವ ಬಾಲಿವುಡ್ ನಟ ವಿವೇಕ್ ಒಬೆರಾಯ್ ಸಂಬಂದಿ ಆದಿತ್ಯ ಆಳ್ವ ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.