BREAKING | ದ್ವಿತೀಯ PUC ಫಲಿತಾಂಶ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ…

PUC results

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಇನ್ನು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧ್ಯಾಹ್ನ 1:30ರಿಂದ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಸಿಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.