H.Y. Meti passes away | ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹೌದು, ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇದೀಗ ನಿಧನರಾಗಿದ್ದಾರೆ.
ಶಾಸಕ ಹೆಚ್.ವೈ. ಮೇಟಿ ಅವರು 2023ರ ಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013-2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




