ಚಿತ್ರದುರ್ಗದಲ್ಲಿ ಸರಣಿ ಅಪಘಾತ; ಮೂವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ಚಿತ್ರದುರ್ಗ : ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ…

Road accident vijayaprabha

ಚಿತ್ರದುರ್ಗ : ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.

ಟಾಟಾ ಸಫಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ದಾಟಿ ಶಿರಾದತ್ತ ಸಾಗುತ್ತಿದ್ದ ಕ್ಯಾಂಟರ್ಗೆ ಅಪ್ಪಳಿಸಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಗಂಡ ಹೆಂಡತಿ ಹಾಗೂ ಕ್ಯಾಂಟರ್ ಚಾಲಕ ಪುಣೆಯ ಮೃತ ಪಟ್ಟಿದ್ದಾರೆ.

ಇನ್ನು ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.