Meta Down: ಸರ್ವರ್ ಡೌನ್ ಆಗಿ ಸ್ಥಗಿತಗೊಂಡಿದ್ದ ಸಾಮಾಜಿಕ ಜಾಲತಾಣಗಳು ಸಹಜ ಸ್ಥಿತಿಗೆ

ನವದೆಹಲಿ: ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸಾಪ್, ಫೇಸ್…

ನವದೆಹಲಿ: ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ವಿಶ್ವವ್ಯಾಪಿ ಸ್ಥಗಿತಗೊಂಡಿದ್ದು, ಬಳಕೆದಾರರು ಪರದಾಡಿದ್ದಾರೆ. ಅನೇಕ ವಾಟ್ಸಪ್ ಬಳಕೆದಾರರು ಸಂದೇಶಗಳನ್ನು ಸ್ವೀಕರಿಸಲು ಮತ್ತು ಕಳುಹಿಸಲು ತೊಂದರೆಯಾಗಿರುವುದಾಗಿ ವರದಿ ಮಾಡಿದ್ದಾರೆ. 

ವಾಟ್ಸಾಪ್ ವೆಬ್, ಫೇಸ್ಬುಕ್, ಫೇಸ್ಬುಕ್, ಇನ್ ಸ್ಟಾಗ್ರಾಂ ಲಾಗಿನ್ ತಡರಾತ್ರಿವರೆಗೂ ಸರಿಯಾಗುತ್ತಿರಲಿಲ್ಲ ಎಂದು ಬಳಕೆದಾರರು ದೂರಿದ್ದರು. ಸೇವೆಗಳ ಸ್ಥಗಿತದಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆತಂಕ ಸೃಷ್ಟಿಯಾಗಿತ್ತು. ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿದ್ದ ಸೇವೆಗಳು ಇದೀಗ ಸಹಜ ಸ್ಥಿತಿಗೆ ಮರಳಿವೆ ಎಂದು ಮೆಟಾ ಸಂಸ್ಥೆ ಮಾಹಿತಿ ನೀಡಿದೆ.

Vijayaprabha Mobile App free

ಬೆಳಗಿನ ಜಾವ 3:50 ರ ಸುಮಾರಿಗೆ, ಮೆಟಾ ಒಂದು ಅಪ್‌ಡೇಟ್ ಅನ್ನು ನೀಡಿತು, “ನಮ್ಮೊಂದಿಗೆ ಇದ್ದಿದ್ದಕ್ಕಾಗಿ ಧನ್ಯವಾದಗಳು! ನಾವು 99 ಪ್ರತಿಶತದಷ್ಟು ಪರಿಹಾರದ ಮಾರ್ಗದಲ್ಲಿದ್ದೇವೆ. ಕೆಲವು ಕೊನೆಯ ತಪಾಸಣೆಗಳನ್ನು ಮಾಡುತ್ತಿದ್ದೇವೆ. ಸ್ಥಗಿತದಿಂದ ತೊಂದರೆಗೊಳಗಾದವರಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.