Cold Alert | ರಾಜ್ಯಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೌದು, ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಉಳಿದಂತೆ ಅದೇ ಭಾಗದ ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಲ್ಲಿ 6 ರಿಂದ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Borewell Penalty: ವಿಫಲ ಬೋರ್ವೆಲ್‌ಗಳನ್ನು ಮುಚ್ಚದೇ ಬಿಡುವವರಿಗೆ ಒಂದು ವರ್ಷ ಜೈಲು!
Cold Alert | ಶೀತ ಗಾಳಿಯ ನಡುವೆಯೇ ಮಳೆ(Rain)
ಇನ್ನು, ಉತ್ತರ ಕರ್ನಾಟಕದಲ್ಲಿ ಬೀಸುತ್ತಿರುವ ತೀವ್ರ ಶೀತ ಗಾಳಿಯ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗಲಿದ್ದು, ಡಿ. 19, 20 ಹಾಗೂ 21 ರಂದು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಹೌದು, ಡಿ. 19 ರಿಂದ ಗರಿಷ್ಠ ಉಷ್ಣಾಂಶವೂ ಏರಿಕೆಯಾಗುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಶುಷ್ಕ ಹವಾಮಾನ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Tractor subsidy | ಕೇಂದ್ರ ಸರ್ಕಾರದಿಂದ ಟ್ರ್ಯಾಕ್ಟರ್ ಖರೀದಿಗೆ 3 ಲಕ್ಷ ಸಬ್ಸಿಡಿ