Cold wave | ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಭಾರೀ ಚಳಿ ಹಾಗು ಮಂಜು ತುಂಬಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ.




