ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರುವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶರತ್ ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇತ್ತೀಚಿಗೆ ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ಅವರನ್ನು ಶರತ್ ಬಚ್ಚೇಗೌಡ ಸೋಲಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.