ಹರಪನಹಳ್ಳಿ : ತಾಲೂಕಿನ ದಡೀಗರನಹಳ್ಳಿ ಗ್ರಾಮದ ಬಳಿ ಮೂವತ್ತು ಕುರಿಗಳ ಮೇಲೆ ಇಂದು ಚಿರತೆ ದಾಳಿ ಮಾಡಿದ್ದು, ಸ್ಥಳದಲ್ಲಿಯೇ ಕುರಿಗಳು ಸಾವನ್ನಪ್ಪಿವೆ. ಇದರಿಂದ ಸುಮಾರು ಲಕ್ಷ ರೂ.ನಷ್ಟವಾಗಿದೆ.
ಕುರಿಗಾಹಿ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ಮಾಡುವಂತಾಗಿದೆ. ಅಲ್ಲದೇ ಇಲ್ಲಿ ವಾಸ ಮಾಡುವ ಕುಟುಂಬಗಳು ಹೊರಗಡೆ ಹೋಗಲು ಹೆದರುತ್ತಿದ್ದಾರೆ. ಇನ್ನಾದರೂ ಅರಣ್ಯ ಇಲಾಖೆ ಚಿರತೆ ಹಿಡಿಯಬೇಕಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.