ಉಡುಪಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಶೋಭಾ ಕರಂದ್ಲಾಜೆ ಬಗ್ಗೆ ಮಹಿಳೆಯಾಗಿ ವೈಯಕ್ತಿಕ ಗೌರವ ಇದೆ. ಆದರೆ ಶೋಭಾ ಅವರು ಯಾವಾಗಲೂ ಉರಿವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಯಾವಾಗಲೂ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮುಡಾ ಮೇಲೆ ರಾಜಕೀಯ ಪ್ರೇರಿಯ ಇಡಿ ರೈಡ್ ನಡೆಯುತ್ತಿದೆ. ರಾಜಭವನ, ರಾಜ್ಯಪಾಲರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪಂಚಮಸಾಲಿ ಲಿಂಗಾಯತ 2A ಮೀಸಲಾತಿ ಬಗ್ಗೆ ಸಿಎಂ ಜೊತೆ ಮಾತುಕತೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಇರುವುದರಿಂದ ನೀತಿ ಸಹಿತೆ ಜಾರಿಯಲ್ಲಿದೆ. ಸಭೆಯಲ್ಲಿ ನಡೆದ ವಿಚಾರ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.