BIG NEWS: ಸಿಎಂ ಬಿಎಸ್ ವೈಗೆ ಶಾಕ್ ಮೇಲೆ ಶಾಕ್; ಸಿಎಂ ವಿರುದ್ಧ ಸಿಡಿದೆದ್ದ ಈಶ್ವರಪ್ಪ

ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಇಂದು ತನಿಖೆಗೆ ಆದೇಶ ನೀಡಿದ್ದರೆ, ಮತ್ತೊಂದೆಡೆ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ವಿರುದ್ಧ ಸಿಡಿದೆದ್ದಿದ್ದು ಸಿಎಂಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.…

b s yediyurappa vijayaprabha

ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಇಂದು ತನಿಖೆಗೆ ಆದೇಶ ನೀಡಿದ್ದರೆ, ಮತ್ತೊಂದೆಡೆ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ವಿರುದ್ಧ ಸಿಡಿದೆದ್ದಿದ್ದು ಸಿಎಂಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.

ಹೌದು, ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರೀತಂ ಗೌಡ, ಶಿವನಗೌಡ ನಾಯಕ್, ಮತ್ತು ಎಂ.ಬಿ. ಮರಮಕಲ್ ಅವರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಆಪರೇಷನ್ ಕಮಲ ನಡೆಸಿಯೇ ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಈ ಆದೇಶ ಅಲ್ಪಮಟ್ಟದ ಪುಷ್ಠಿ ನೀಡಿದೆ.

ಇನ್ನು, ಕ್ಯಾಬಿನೆಟ್ ಸಚಿವರ ಖಾತೆಗಳಲ್ಲಿ ಸಚಿವರ ಅಧಿಕಾರ ಮೊಟಕುಗೊಳಿಸಿ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಆರೋಪಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ, ರಾಜ್ಯಪಾಲರಿಗೆ ಪತ್ರ ಬರೆದು ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.