ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ

ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ (65) ಅವರು ಲಿಂಗೈಕ್ಯರಾಗಿದ್ದಾರೆ. ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದರು.…

Siddarama Desikendra Mahaswamiji vijayaprabha

ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ (65) ಅವರು ಲಿಂಗೈಕ್ಯರಾಗಿದ್ದಾರೆ.

ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದರು. ಸ್ವಾಮೀಜಿ ಅವರು ಕಿಡ್ನಿ ಸಮಸ್ಯೆ, ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದ್ದು, ಇಂದು ಬೆಳೆಗ್ಗೆ ಗೋಡೆಕೆರೆ ಮೂಲ ಮಠದಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿ ಗೋಡೆಕೆರೆ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ಮಾಡಲುತ್ತದೆ ಎಂದು ತಿಳಿದು ಬಂದಿದೆ.

Vijayaprabha Mobile App free

ಗೋಡೆಕೆರೆಯಲ್ಲಿ ಸಿದ್ದರಾಮೇಶ್ವರ ತೋರುಗದ್ದುಗೆ ಇದ್ದು, ಈ ಗದ್ದುಗೆಯೇ ಮತವಾಗಿ ಪ್ರವರ್ಧಮಾನಕ್ಕೆ ಬಂದಿತ್ತು. ತೋರು ಗದ್ದುಗೆಯ ಕಾರಣದಿಂದ ಪ್ರಮುಖ ಮಠವಾಗಿ ಗುರುತಿಸಿಕೊಂಡಿತ್ತು. ಈ ಮಠಕ್ಕೆ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಪಟ್ಟಾಧ್ಯಕ್ಷರಾಗಿದ್ದರು

ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ನಿಧನಕ್ಕೆ ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತಾದಿಗಳು ಕಂಬನಿ ಮಿಡಿದಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.