ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ಸಂಬಂಧ ನಡೆದಿರುವ ಘರ್ಷಣೆ ರಾಜಕೀಯ ನಾಯಕರ ನಡುವಿನ ಆರೋಪ ಪ್ರತ್ಯಾರೋಪಕ್ಕೆ ಅಸ್ತ್ರವಾಗಿದ್ದು, ಮಾಜಿ ಈಶ್ವರಪ್ಪ ದಿನಕ್ಕೊಂದು ಹೇಳಿಕೆ ನೀಡುವ ವಿವಾದಕ್ಕೆ ತುಪ್ಪ ಸುರಿಯುತ್ತಿದ್ದಾರೆ. ಈ ನಡುವೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೊಂದು ಮತ್ತಷ್ಟು ಕೆಸೆರೆರಚಾಟಕ್ಕೆ ಕಾರಣವಾಗಿದೆ.
ಹೌದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, “ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕಿತ್ತು?. ಟಿಪ್ಪು ಬ್ಯಾನರ್ ಏಕೆ ತೆರವು ಮಾಡುವುದು?. ಇದರಿಂದ ಗಲಭೆ ಆಗುವುದಿಲ್ಲವೇ?, ಬಿಜೆಪಿಯವರು ಅವರೇ ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ” ಎಂದು ಗಲಭೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಇದು ಬಿಜೆಪಿಗರ ಕಣ್ಣು ಕೆಂಪಗಾಗಿಸಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಹಿಡಿದುಕೊಂಡು ಈಶ್ವರಪ್ಪ ಹೊಸ ಹೇಳಿಕೆಯೊಂದಿಗೆ ರಂಗಕ್ಕಿಳಿದಿದ್ದಾರೆ.