ಮೈಸೂರು: ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಮಂತ್ರಿ ಆಗಲು ನಾಗೇಶ್ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಪಠ್ಯಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಬಳಿಕ ರೋಹಿತ್ ಚಕ್ರತೀರ್ಥ ಸಮಿತಿಯನ್ನು ಕೈಬಿಡಲಾಗಿದೆ. ಬಿಜೆಪಿಯವರಿಗೆ ನಿಜವಾದ ಇತಿಹಾಸ ಗೊತ್ತಿಲ್ಲ. ಆದರೆ ಇತಿಹಾಸ ತಿರುಚುವುದು ಗೊತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.