ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ವಿರುದ್ಧವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವ ಬಿಜೆಪಿ ಸರ್ಕಾರ, ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದು, ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ ಮತ್ತು ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.
ಇನ್ನು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಬಿಜೆಪಿ ಸರ್ಕಾರದ ಹೇಡಿತನವನ್ನು ತೋರಿಸುತ್ತದೆ ಸಿದ್ದರಾಮಯ್ಯ ಟೀಕಿಸಿದ್ದು, ಚರ್ಚೆ ಮಾಡಿದರೆ ಈ ಗೋಹತ್ಯೆ ಮಸೂದೆಯ ನಿಷೇಧದ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಿಗೆ ಇತ್ತು ಎಂದು ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.