ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು: ಸಿದ್ದರಾಮಯ್ಯ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ,…

Siddaramaih vijayaprabha

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮತ್ತು ನಾವು ಜೊತೆಗೂಡಿ ಗ್ರಾಮ ಪಂಚಾಯತಿ ಚುನಾವಣೆ ಎದುರಿಸಿದ್ದರಿಂದ ಶೇ.70 ಸ್ಥಾನ ಗೆದ್ದಿದ್ದೇವೆ. ಈ ಕಾರಣಕ್ಕಾಗಿ ನಿನ್ನೆ ನನ್ನನ್ನು ಭೇಟಿಯಾಗಿ ಧನ್ಯವಾದ ಹೇಳಿದರು. ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಮಾತುಕತೆ ಹಂತದಲ್ಲಿದ್ದು ಮುಂದಿನ ಕೆಲವೇ ದಿನಗಳ ಒಳಗೆ ಅಂತಿಮಗೊಳ್ಳಲಿದೆ.

ಯಡಿಯೂರಪ್ಪ ಅವರೇ ಸಿ.ಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು. ಆರ್.ಎಸ್.ಎಸ್ ನಾಯಕರು ಹೇಳುವ ಪ್ರಕಾರ ಏಪ್ರಿಲ್ ನಂತರ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸ್ತಾರಂತೆ.

Vijayaprabha Mobile App free

ಕುರುಬರನ್ನು ಎಸ್ ಟಿ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮುಗಿದು ವರದಿ ಬರಲಿ, ಅದನ್ನು ಸಚಿವ ಸಂಪುಟ‌ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ಮನವಿಯನ್ನು ತಿರಸ್ಕರಿಸಿದರೆ ಹೋರಾಟ ಅನಿವಾರ್ಯ ಆಗಬಹುದು.

ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಡೆಸುತ್ತಿರುವ ಹೋರಾಟಕ್ಕೆ ನನ್ನ ವಿರೋಧ ಖಂಡಿತಾ ಇಲ್ಲ. ಆದರೆ ಇದು ಹೋರಾಟ ಮಾಡುವ ಸಮಯವಲ್ಲ. ಸಮುದಾಯದ ಬಲಪ್ರದರ್ಶನ, ಹೋರಾಟ ಮಾಡಬೇಕಾದ ಸಂದರ್ಭಗಳು ಮುಂದೆ ಬರಲಿದೆ. ಕಾದು ನೋಡೋಣ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.