ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನರಿಗೆ ಮುಖ ಗುರುತು ಸಿಗಬಾರದು ಎಂಬ ಕಾರಣದಿಂದ ಮೋದಿ ಗಡ್ಡ ಬೆಳೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಪ್ರದಾನಿ ಮೋದಿ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ‘ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರುತ್ತಿದ್ದು, ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇದರಿಂದ ಜನರಿಗೆ ಮುಖ ಗುರುತು ಸಿಗಬಾರದು ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗಡ್ಡ ಬೆಳೆಸಿದ್ದಾರೆ. ಸುಳ್ಳಿಗೆ ಪರ್ಯಾಯ ಪದ ಎಂದರೆ ಮೋದಿ. ಅವರ ಬಣ್ಣವನ್ನು ಬಯಲು ಮಾಡುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದಾಗಿದ್ದು, ಕೇಂದ್ರದಲ್ಲಿ ಅತಿ ಕೆಟ್ಟ ಸರ್ಕಾರ ಈಗ ಅಧಿಕಾರದಲ್ಲಿದೆ’ ಎಂದು ಹೇಳಿದರು.
ಇನ್ನು ಕರ್ನಾಟಕದಲ್ಲೂ ಅಸಮರ್ಥ, ಭ್ರಷ್ಟ ಸರ್ಕಾರವಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ದವೂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ @narendramodi ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ. 1/3#BJPFailsIndia pic.twitter.com/W0606abCPp
— Siddaramaiah (@siddaramaiah) February 21, 2021