ರಾಯಚೂರು: ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರೋಧವಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
ರಾಯಚೂರಿನ ಸಿಂಧನೂರಿನಲ್ಲಿ ಸೋಮವಾರ ಮಾತನಾಡಿದ ಸಚಿವ ಈಶ್ವರಪ್ಪ ಅವರು, ಸಮಾಜದ ಸ್ವಾಮೀಜಿಗಳು ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸುವಂತೆ ಕೋರಿದ್ದಾರೆ. ನಾನು ಕೂಡ ವೈಯಕ್ತಿಕವಾಗಿ ಸಿದ್ದರಾಮಯ್ಯರನ್ನು ಹೋರಾಟಕ್ಕೆ ಆಹ್ವಾನಿಸಿದ್ದು, ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದು ಅವರೂ ಕೂಡ ತಿಳಿಸಿದ್ದಾರೆ. ಹೀಗಾಗಿ ಹೋರಾಟ ದಾರಿ ತಪ್ಪುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಇನ್ನೂ ರಾಜಕೀಯ ಒತ್ತಡದ ಕೊರತೆಯಿಂದ ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಸಿಕ್ಕಿಲ್ಲ. ಆದ್ದರಿಂದ ರಾಜಕೀಯ ಒತ್ತಡ ಹೇರಲು ಸಿದ್ಧತೆ ನಡೆಸಿದ್ದು ಜನವರಿ 15 ರಿಂದ ಕಾಗಿನೆಲೆಯಿಂದ ಶ್ರೀಗಳ ಪಾದಯಾತ್ರೆ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ 10 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಇದನ್ನು ಓದಿ: ಮಕರ ಸಂಕ್ರಾಂತಿ ದಿನದಂದು ಕುರುಬರ ದಿಕ್ಕು ಬದಲಾಗಲಿದೆ: ನಿರಂಜನಾನಂದಪುರಿ ಶ್ರೀ
ಇದನ್ನು ಓದಿ: ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟ
ಇದನ್ನು ಓದಿ: ಪಿಪಿಎಫ್, ಸುಕನ್ಯಾ ಸಮೃಧಿ, ಪೋಸ್ಟ್ ಆಫೀಸ್ ಯೋಜನೆಗಳ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದಿಂದ ಒಳ್ಳೆಯ ಸುದ್ದಿ