ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಂತಾಪ ಸೂಚಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ “ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ತುಂಬಾ ದು:ಖವಾಯಿತು. 80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು.
80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/heJAN6PeiF— Siddaramaiah (@siddaramaiah) October 27, 2020
ಇನ್ನು ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಹ ಸಂತಾಪ ಸೂಚಿಸಿದ್ದು, “ಮಾಜಿ ಸಚಿವರಾಗಿದ್ದ ಮತ್ತು ಶಾಸಕರಾಗಿ ಸೇವೆ ಸಲ್ಲಿಸಿದ್ದ ಡಾ.ವೈ.ನಾಗಪ್ಪ ಅವರ ನಿಧನ ತುಂಬಾ ದುಃಖ ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಮತ್ತು ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಸಚಿವರಾಗಿದ್ದ ಮತ್ತು ಶಾಸಕರಾಗಿ ಸೇವೆ ಸಲ್ಲಿಸಿದ್ದ ಡಾ.ವೈ.ನಾಗಪ್ಪ ಅವರ ನಿಧನ ತುಂಬಾ ದುಃಖ ತಂದಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಮತ್ತು ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/KPTRa5iu7H— K S Eshwarappa (@ikseshwarappa) October 27, 2020
ಇದನ್ನಿ ಓದಿ: ಮಾಜಿ ಸಚಿವ ಡಾ.ವೈ.ನಾಗಪ್ಪ ವಿಧಿವಶ