ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ, ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿದ್ದು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ಆದೇಶ ನೀಡಿದ್ದು, ಈಗಲೂ ಅದರ ಅಧ್ಯಯನ ನಡೆಯುತ್ತಿದೆ. ಅದರ ವರದಿ ಬಂಡ ಮೇಲೆ ಒತ್ತಡ ಹೇರಬೇಕು. ಈಗಲೇ ಸಮಾವೇಶ, ರ್ಯಾಲಿಗಳು ನಡೆಸುವುದು ಅನಗತ್ಯ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ.
ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶ. ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಶೋಷಿತ ಸಮುದಾಯಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ಇದರ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಈಶ್ವರಪ್ಪ ಯಾರು? ಅವರು ಕೊಡೋ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಮೊದಲು ಅವರ ಸರ್ಕಾರ ಏನು ಮಾಡಿದೆ ಎಂಬುದನ್ನು ಹೇಳಬೇಕು ಎಂದು ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ನಾನು ಮುಖ್ಯಮಂತ್ರಿಯಾಗಿದ್ದಾಗ ಆದೇಶಿಸಿದ್ದೆ, ಈಗಲೂ ಅಧ್ಯಯನ ನಡೆಯುತ್ತಿದೆ, ಅದು ಮುಗಿದು ವರದಿ ಬಂದ ನಂತರ ಸರ್ಕಾರದ ಮೇಲೆ ಒತ್ತಾಡ ಹೇರಬೇಕು. ಈಗಲೇ ಸಮಾವೇಶ, ರ್ಯಾಲಿಗಳು ಅನಗತ್ಯ ಅನ್ನೋದು ನನ್ನ ಅನಿಸಿಕೆ. 2/4#Hubballi
— Siddaramaiah (@siddaramaiah) February 11, 2021
ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ. ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ? 3/4#Hubballi
— Siddaramaiah (@siddaramaiah) February 11, 2021