ಬಾದಾಮಿ: ಆರ್ ಆರ್ ನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು, ಆರ್ ಆರ್ ನಗರದಲ್ಲಿ ಒಳ್ಳೆಯ ಫೈಟ್ ಕೊಡುತ್ತೇವೆ ಎಂದುಕೊಂಡಿದ್ದೆವು. ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಆಡಳಿತ ಪಕ್ಷದ ಜವಾಬ್ದಾರಿಯಾಗಿರುತ್ತದೆ. ಆದರೆ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಆರ್ ಆರ್ ನಗರ, ಶಿರಾದಲ್ಲಿ ಬಿಜೆಪಿ ಹಣದ ಹೊಳೆ ಹರಿಸಿದೆ. ಬೈ ಎಲೆಕ್ಷನ್ ನಲ್ಲಿ ಅಧಿಕಾರ ದುರ್ಭಳಕೆ, ಹಣ ಕೆಲಸ ಮಾಡಿದೆ. ಏನೇ ಆದ್ರೂ ಮತದಾರರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ.
ಆರ್ ಆರ್ ನಗರದಲ್ಲಿ ಜೆಡಿಎಸ್, ಬಿಜೆಪಿ ಹೊಂದಾಣಿಕೆಯಂತಿತ್ತು. ಬೇಕು ಅಂತಲೇ ಜೆಡಿಎಸ್ ನವರು ಡಮ್ಮಿ ಕ್ಯಾಂಡಿಡೇಟ್ ಹಾಕಿದ್ದರು ಅನಿಸುತ್ತಿದೆ ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.