ಕಲುಬುರಗಿ: ರಾಜ್ಯ ಸರ್ಕಾರದ ವಿರುದ್ಧ ಕಲುಬುರಗಿಯಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯಗಿಂತ ಹೆಚ್ಚು ದಮ್ ಇದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳುತ್ತಾರೆ. ನನಗಿಂತ ೧೦ ಪಟ್ಟು ದಮ್ ಹೆಚ್ಚಾಗಿ ಇರಲಿ. ಡಿಸಿಎಂ ಅಶ್ವಥ್ ನಾರಾಯಣ್ ಗೆ ಹೆಚ್ಚು ಧಮ್ ಇದ್ದರೆ ಪ್ರಧಾನಿ ಮೋದಿ ಬಳಿ ಹೋಗಿ ಪರಿಹಾರವನ್ನು ತಂದುಕೊಡಲಿ ಎಂದು ಕಲುಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರು ಪ್ರಯೋಜನವಿಲ್ಲ. ನೆರೆ ಸಂತ್ರಸ್ತರಿಗೆ ನಯಾ ಪೈಸೆ ಹಣ ನೀಡಿಲ್ಲವೆಂದು ಆರೋಪಿಸಿದ್ದು, ರಾಜ್ಯ ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಇನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಅವರ ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ ಇಂಥ ಭ್ರಷ್ಟ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಕಲುಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಇದನ್ನು ಓದಿ: ರಾಜ್ಯದಲ್ಲಿ ಕರೋನ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ಇದೆಯೇ ಕಟೀಲ್ ಅವರೇ..?