ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ, ಆಪರೇಷನ್…

Siddaramaih vijayaprabha

ಬೆಂಗಳೂರು : ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ, ಆಪರೇಷನ್ ಕಮಲಕ್ಕೆ ಯೋಗೀಶ್ವರ್ ಕೋಟ್ಯಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈ ವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕು.

ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ 9 ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು? ಈ ಆರೋಪವನ್ನು ನಾವು ಮಾಡಿದ್ದರೆ ವಿರೋಧಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ. ಇದಕ್ಕೆ ಏನನ್ನುತ್ತಾರೆ?

Vijayaprabha Mobile App free

ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ, ಇನ್ನು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವುದರಿಂದ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ? ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು.

ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿರುವಾಗ ಬ್ಲಾಕ್‌ಮೇಲ್ ಮಾಡುವ ಅಗತ್ಯವೇನಿದೆ. ಜಮೀರ್ ಅಹ್ಮದ್ ಅವರು ಹಣ ಬಿಡುಗಡೆ ಮಾಡಿ ಅಂತ ಮನವಿ ಮಾಡಿದ್ದಾರೆ, ಅದಕ್ಕೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಆದೇಶಕ್ಕೂ, ಶಿಫಾರಸಿಗೂ ವ್ಯತ್ಯಾಸವಿದೆ.

ಚಾಮರಾಜಪೇಟೆ ಕ್ಷೇತ್ರಕ್ಕೆ ನಮ್ಮ ಪಕ್ಷದ ಶಾಸಕ ಜಮೀರ್ ಅಹಮದ್ ಅವರು ಕೇಳಿದಷ್ಟು ಮುಖ್ಯಮಂತ್ರಿಗಳು ಅನುದಾನ ನೀಡಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಮಂತ್ರಿಗಿರಿ ಕೈತಪ್ಪಿದ್ದರಿಂದ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ.

ಕೃಷಿಗೆ ಮಾರಕವಾದ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಕಾಂಗ್ರೆಸ್ ಪಕ್ಷ ನಿನ್ನೆ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಸಂಕ್ರಾಂತಿ ಹಬ್ಬದ ಕಾರಣಕ್ಕೆ ನಾವು ನಿನ್ನೆ ಪ್ರತಿಭಟನೆ ಮಾಡಿಲ್ಲ, ಈ ತಿಂಗಳ 20ನೇ ತಾರೀಖಿನಂದು ಪಕ್ಷದ ವತಿಯಿಂದ “ರಾಜಭವನ ಚಲೋ” ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.