ದಾವಣಗೆರೆ: ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಆ.3ರಂದು ಸಿದ್ದರಾಮಯ್ಯ-75 ಅಮೃತ ಮಹೋತ್ಸವ ನಡೆಯಲಿದೆ. ವಿಧಾನಸಭೆ ಚುನಾವಣೆ ಮುನ್ನವೇ ಮುಂದಿನ ಮುಖ್ಯಮಂತ್ರಿ ವಿಚಾರದ ಬಗ್ಗೆ ‘ಕೈ’ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಮಧ್ಯೆ ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ 75 ಅಮೃತ ಮಹೋತ್ಸವಕ್ಕೆ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.
ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, 4 ಲಕ್ಷ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲು ಅಮೃತ ಮಹೋತ್ಸವ ಸಮಿತಿ ನಿರ್ಧರಿಸಿದ್ದು, 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಹಾಗೂ ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮಳೆ ಬಂದರೆ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ವ್ಯವಸ್ಥೆಗಳ ಹೊಣೆಯನ್ನು ಬೇರೆ ಬೇರೆ ನಾಯಕರಿಗೆ ವಹಿಸಲಾಗಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.