ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಮಾಹಿತಿ ನೀಡಿದ್ದು, ಕೊರೋನಾ ಲಸಿಕೆಯ ಆಂದೋಲನದ ಭಾಗವಾದ 2ನೇ ದಿನವಾದ ಇಂದು 6 ರಾಜ್ಯಗಳಲ್ಲಿ 17,072 ಮಂದಿ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಕರೋನ ಚುಚ್ಚುಮದ್ದು ಪಡೆದವರ ಸಂಖ್ಯೆ 2,24,301ಕ್ಕೆ ಏರಿದ್ದು, 447 ಜನರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂದು ತಿಳಿದು ಬಂದಿದ್ದು, ಈ ಪೈಕಿ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಬ್ಬರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಮಾತ್ರ ಋಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಅರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.