ನವದೆಹಲಿ: ಕಂಪನಿಗಳ ಕರೆಗಳು ಮತ್ತು ಎಸ್ ಎಂ ಎಸ್ ಮೂಲಕ ಚಂದಾದಾರರಿಗೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ದೂರಸಂಪರ್ಕ ಸಚಿವ ರವಿ ಶಂಕರ್ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೌದು ಪದೇ ಪದೇ ಕರೆ ಮತ್ತು SMSಗಳನ್ನು ಟೆಲಿಕಾಂ ಕಂಪನಿಗಳು ಮಾಡಿದ್ದಲ್ಲಿ, ಟೆಲಿಕಾಂ ಕಂಪನಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ರವಿ ಶಂಕರ್ ಪ್ರಸಾದ್ ಸೂಚನೆ ನೀಡಿದ್ದಾರೆ. ಜೊತೆಗೆ ಆರ್ಥಿಕ ವಂಚನೆಗಳನ್ನು ತಡೆಗಟ್ಟಲು ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆಯನ್ನ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.